ಸ್ಯಾಂಡಲ್‍ವುಡ್ ನಟ ಕಂ ನಿರ್ಮಾಪಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲು…

109
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ನ ನಟ ಕಂ ನಿರ್ಮಾಪಕನ ವಿರುದ್ಧ ಅತ್ಯಾಚಾರ ಪ್ರಕರಣವೊಂದು ದಾಖಲಾಗಿದೆ.

‘ವಿಷನ್ 2023′ ಚಿತ್ರದ ನಾಯಕ ಹರ್ಷವರ್ಧನ್ ಅಲಿಯಾಸ್ ವಿಜಯ್ ಭಾರ್ಗವ್ ವಿರುದ್ಧ ಈ ಆರೋಪ ಕೇಳಿಬಂದಿದೆ. ಸಿನಿಮಾಗಳಲ್ಲಿ ಪಾತ್ರ ಮಾಡುತ್ತಿದ್ದ ನಟಿಯೊಬ್ಬರು ಇವರ ವಿರುದ್ಧ ದೂರು ನೀಡಿದ್ದರು. ಸುಮಾರು 2 ವರ್ಷಗಳಿಂದ ತನ್ನನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ್ದಾನೆ ಎಂದು ಆರೋಪಿಸಿದ್ದರು. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ಮೇಲ್ನೋಟಕ್ಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಹರ್ಷವರ್ಧನ್ ವಿರುದ್ಧ ಐಪಿಸಿ ಸೆಕ್ಷನ್ 417, 376, 504, 506 ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಅವರನ್ನು ಬಂಧಿಸಿ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ನಟಿಗೆ ಮೆಡಿಕಲ್ ಟೆಸ್ಟ್ ನಡೆಸಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.