‘ಸ್ವಾತಂತ್ರೋತ್ಸವ ಅಮೃತ ಮಹೋತ್ಸವ’ಕ್ಕೆ ಪ್ರಧಾನಿ ಮೋದಿ ಚಾಲನೆ…

138
Firstsuddi

ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ನ ಸಾಬರಮತಿ ಆಶ್ರಮದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವಕ್ಕೆ ಚಾಲನೆ ನೀಡಿದರು.

ಇಂದು ಬೆಳಗ್ಗೆ ಸಾಬರಮತಿ ಆಶ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹಾತ್ಮ ಗಾಂಧಿ ಅವರಿಗೆ ಪುಷ್ಪಾರ್ಪಣೆ ಮೂಲಕ ಗೌರವ ಸಲ್ಲಿಸಿದರು.

ದೇಶಕ್ಕೆ ಸ್ವಾತಂತ್ರ್ಯ ಬಂದು 2022ರ ಆಗಸ್ಟ್ 15ಕ್ಕೆ 75ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಜನ-ಭಾಗಿದಾರಿ ಹಾಗೂ ಜನ-ಉತ್ಸವದ 75 ವಾರಗಳ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಿದರು. ಅಲ್ಲದೇ ದಂಡಿ ಮೆರವಣಿಗೆಯ 91 ನೇ ವಾರ್ಷಿಕೋತ್ಸವದ ನೆನಪಿಗಾಗಿ ‘ಪಾದಯಾತ್ರೆ’ಗೆ ಪಿಎಂ ಮೋದಿ ಅವರು ಚಾಲನೆ ನೀಡಿದರು.

ಅಮೃತ ಮಹೋತ್ಸವದ ಅಂಗವಾಗಿ ಅಹಮದಾಬಾದ್ ನ ಅಭಯ್ ಘಾಟ್ ಹತ್ತಿರ ಏರ್ಪಡಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಪ್ರಧಾನಿ ಮೋದಿ ಛಾಯಾಚಿತ್ರಗಳು, ಮ್ಯಾಗಜಿನ್ ಗಳು ಮತ್ತು ಇತರ ಸಂಗ್ರಹಗಳನ್ನು ವೀಕ್ಷಿಸಿದರು.