ಹನುಮನ ಪೂಜೆಗೆಂದು ನದಿಗೆ ನೀರು ತರಲು ಹೋದಾಗ ಬೊಲೆರೋ ಹರಿದು ಮೂವರು ಸಾವು…

47
firstsuddi

ರಾಯಚೂರು: ಹನುಮನ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೋ ವಾಹನ ಹರಿದು ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಕ್ತಿನಗರ ಬಳಿ ಬರುವ ಹಳೆ ಮೈಸೂರು ಪೆಟ್ರೋ ಕೆಮಿಕಲ್ಸ್ ಫ್ಯಾಕ್ಟರಿ ಬಳಿ ನಡೆದಿದೆ.

ಹೆಗಸನಹಳ್ಳಿ ಗ್ರಾಮದ ಅಯ್ಯನಗೌಡ (28), ಮಹೇಶ್ (24), ಉದಯ್ ಕುಮಾರ್ (28) ಮೃತ ದುರ್ದೈವಿಗಳು. ಭೂಷಣ್ ಸೇರಿದಂತೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಹನುಮಾ ಜಯಂತಿ ಪ್ರಯುಕ್ತ ಗ್ರಾಮದಲ್ಲಿ ಆಂಜನೇಯ ದೇವಾಲಯದ ಪೂಜಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ 10 ಜನ ಸೇರಿ ಶಕ್ತಿನಗರ ಹತ್ತಿರ ಕೃಷ್ಣಾ ನದಿಯಿಂದ ನೀರು ತಂದು ಪೂಜೆ ಮಾಡುವುದಕ್ಕೆ ಬೆಳಗಿನ ಜಾವ ಹೊರಟಿದ್ದರು. ಈ ವೇಳೆ ಕೋಳಿ ಸಾಗಿಸುತ್ತಿದ್ದ ಬೊಲೆರೊ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಮಧುಸೂದನ್ ಗೌಡ ಪರಾರಿಯಾಗಲು ಯತ್ನಿಸಿದನು. ಬೆನ್ನಟ್ಟಿದ್ದ ಗ್ರಾಮಸ್ಥರು ಚಾಲಕನನ್ನು ಹಿಡಿದಿದ್ದಾರೆ. ಬಳಿಕ ಚಾಲಕ ಮಧುಸೂದನ್ ಗೌಡನನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಶಕ್ತಿನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.