ಹರಿಪ್ರಸಾದ್ ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ : ಸಿಎಂ ಬೊಮ್ಮಾಯಿ.

91
firstsuddi

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಇಂದಿನಿಂದ ಚಿಕ್ಕಮಗಳೂರು ಹಬ್ಬ ಆರಂಭಗೊಳ್ಳಲಿದ್ದು, ಈ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸಿದ್ದಾರೆ. ಇಂದು ಸಂಜೆ ಆರಂಭಗೊಳ್ಳಲಿರುವ ಚಿಕ್ಕಮಗಳೂರು ಹಬ್ಬಕ್ಕೆ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಬೀರೂರಿಗೆ ಬಂದಿಳಿದ ಸಿಎಂ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ನಾಲ್ಕು ವರ್ಷಗಳ ಬಳಿಕ ಉತ್ಸವ ಜರುಗುತ್ತಿದ್ದು, ಇದಕ್ಕೆ ಉತ್ಸಾಹ ತುಂಬುವಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಶಾಸಕ ಸಿಟಿ ರವಿಯವರು ಉತ್ಸವಕ್ಕೆ ಆಸಕ್ತಿ ತೋರಿಸಿದ್ದಾರೆ ಎಂದರು.

ವಿಧಾನ ಪರಿಷತ್ ನ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪಕ್ಷ ತೊರೆದ ಶಾಸಕರನ್ನು ವೇಶ್ಯೆಗೆ ಹೋಲಿಕೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿ.ಕೆ ಹರಿಪ್ರಸಾದ್ ಏಕೆ ಹಾಗೇ ಹೇಳಿದರೂ ಅಂತ ಗೊತ್ತಿಲ್ಲ. ಅವರು ಸ್ವಲ್ಪ ಬ್ಯಾಲೆನ್ಸ್ ಕಳೆದುಕೊಂಡಿದ್ದಾರೆ. ಈ ಹಿಂದೆ 2007ರಲ್ಲಿ ಅವರ ಪಕ್ಷದ ಈಗಿನ ನಾಯಕರು ಜೆಡಿಎಸ್ ಗೆ ರಾಜೀನಾಮೆ ಕೊಟ್ಟು ಕಾಂಗ್ರೆಸ್ ಗೆ ಬಂದು ಸೇರಿಕೊಂಡಿದ್ದರು. ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿಕೊಂಡವರಿಗೂ ಬಿ.ಕೆ ಹರಿಪ್ರಸಾದ್ ಅವರ ಮಾತು ಅನ್ವಯಿಸುತ್ತಾ?. ಹೇಳಿಕೆಗಳನ್ನು ನೀಡುವಾಗ ಯೋಚನೆ ಮಾಡಿ ಮಾತನಾಡಬೇಕು ಎಂದರು.