ಹರ್ಷ ಕೊಲೆ ಪ್ರಕರಣ : ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದ ಕೋರ್ಟ್.

46
firstsuddi

ಬೆಂಗಳೂರು : ಶಿವಮೊಗ್ಗದಲ್ಲಿ ನಡೆದಿದ್ದ ಭಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ಆರೋಪಿ ಜಾಫರ್ ಸಾದಿಕ್ ಎಂಬಾತನಿಗೆ ಎನ್ಐಎ ವಿಶೇಷ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಆರೋಪಿಯು 50 ಸಾವಿರ ರೂ.ಗಳ ವೈಯಕ್ತಿಕ ಬಾಂಡ್ ಮತ್ತು ಶ್ಯೂರಿಟಿ ನೀಡಬೇಕು. ನ್ಯಾಯಾಲಯ ವಿನಾಯಿತಿ ನೀಡದ ಹೊರತು, ಪ್ರತಿ ಬಾರಿ ಪ್ರಕರಣದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಪ್ರಕರಣದ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಮತ್ತು ಸಾಕ್ಷ್ಯ ನಾಶ ಮಾಡಬಾರದು. ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗ ಬಾರದು ಎಂದು ನ್ಯಾಯಾಲಯ ಷರತ್ತುಗಳನ್ನು ವಿಧಿಸಿದೆ.

ಸಾದಿಕ್ ನನ್ನು ಫೆಬ್ರವರಿ 24 ರಂದು ಬಂಧಿಸಿದ್ದ ಪೊಲೀಸರು, ಹರ್ಷ ಕೊಲೆ ಪ್ರಕರಣದಲ್ಲಿ 10ನೇ ಆರೋಪಿಯಾಗಿ ಮಾಡಿದ್ದರು. ಜಾಮೀನು ಕೋರಿ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.