ಹಳ್ಳಿಗಳಲ್ಲಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ: ಪದ್ಮ ಪ್ರಸಾದ್ ಜೈನ್.

122
firstsuddi

ಮೂಡುಬಿದಿರೆ: ಪುಚ್ಚಮೋಗರು ಗ್ರಾಮ, ಬಾವದಬೈಲು ನಿತ್ಯಾನಂದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಶಾಲಾ ಬ್ಯಾಗ್ ಗಳನ್ನು ವಿತರಿಸಲಾಯಿತು.

ಹೊಸಬೆಟ್ಟು ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮಪ್ರಸಾದ್ ಜೈನ್ ಸ್ಕೂಲ್ ಬ್ಯಾಗ್ ವಿತರಿಸಿ ಮಾತನಾಡಿದ ಇವರು ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ, ಕನ್ನಡ ಶಾಲಾ ಮಕ್ಕಳಿಗೆ ಪ್ರೋತ್ಸಾಹ ನೀಡಬೇಕು, ಅನುದಾನಿತ ಕನ್ನಡ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಶಿಕ್ಷಕರ ನೇಮಕಾತಿಗೆ ಅನುಮೋದನೆ ನೀಡಬೇಕು. ಸರ್ಕಾರ ಕೂಡಲೇ ಸರ್ಕಾರಿ ಶಾಲೆಗಳಿಗೆ ನೀಡುವ ಸೌಲಭ್ಯಗಳನ್ನು ಅನುದಾನಿತ ಕನ್ನಡ ಶಾಲೆಗಳಿಗೂ ನೀಡಬೇಕು. ಸರಕಾರ, ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿವೆ, ಇದರಿಂದಾಗಿ ಮಕ್ಕಳು ಹಾಗೂ ಪೋಷಕರು ಮುಂದಿನ ನಮ್ಮ ಮಕ್ಕಳ ಭವಿಷ್ಯವೇನು ಎಂದು ಚಿಂತಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಇದರಿಂದ ನಾವೆಲ್ಲರೂ ಸೇರಿ ಗ್ರಾಮೀಣ ಭಾಗದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ ಎಂದರು. ಮಕ್ಕಳು ಶ್ರದ್ಧೆಯಿಂದ ಶಿಕ್ಷಣದ ಗಮನಹರಿಸಿ ಉತ್ತಮ ಅಂಕವನ್ನು ಪಡೆದು ಉತ್ತೀರ್ಣರಾಗಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪತ್ರಕರ್ತರ ಸಂಘದ ಅಧ್ಯಕ್ಷ ಯಶೋಧರ ಅವರು ಮಾತನಾಡಿ ಸರಕಾರಿ- ಅನುದಾನಿತ ಕನ್ನಡ ಶಾಲೆಗಳ ಪ್ರಾಮುಖ್ಯತೆ, ಅವಕಾಶ ಗಳ ಬಗ್ಗೆ ಮಕ್ಕಳಿಗೆ ವಿವರಿಸಿದ್ದರು, ವಿದ್ಯಾರ್ಥಿಗಳು ಇಂತಹ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿ ಶಾಲೆಗೆ, ಗ್ರಾಮಕ್ಕೆ, ಕೀರ್ತಿ ತರುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಮುಖ್ಯ ಶಿಕ್ಷಕಿ ಅನುಪಮಾ ಸ್ವಾಗತಿಸಿದರು, ಗೌರವ ಶಿಕ್ಷಕಿ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಪೋಷಕರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.