ರಾಮನಗರ : ಬಜೆಟ್ ಬಗ್ಗೆ ದೊಡ್ಡಮಟ್ಟಿಗೆ ಹೇಳುವಂತಹದ್ದು ಏನೂ ಇಲ್ಲ. ಹಸಿದವರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಳ್ಳಿ ಅಂತಾರಲ್ಲ, ಆ ರೀತಿ ಇದೆ ಈ ಕೇಂದ್ರ ಬಜೆಟ್ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.
ಬಜೆಟ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸೋಂಕಿನ ಮಹಾಮಾರಿಗೆ ಸಿಲುಕಿ ಭರವಸೆ ಕಳೆದುಕೊಂಡಿರುವ ರೈತಾಪಿ, ಕಾರ್ಮಿಕರಿಗೆ ಧೈರ್ಯ ತುಂಬುವ ಅಥವಾ ಅವರನ್ನು ಆರ್ಥಿಕವಾಗಿ ಮೇಲೆತ್ತುವ ಅಂಶಗಳು ಈ ಬಜೆಟ್ ನಲ್ಲಿ ಇರಬೇಕಿತ್ತು. ಆದರೆ ಈ ಬಜೆಟ್, ಜನರಿಗೆ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಮನೆಯಲ್ಲಿ ಮಲಗಿ ಎನ್ನುವಂತಿದೆ ಎಂದು ಕಿಡಿಕಾರಿದರು.
ನದಿ ಯೋಜನೆ ಬಗ್ಗೆ ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕಾವೇರಿ-ಪೆನ್ನಾರ್, ಕೃಷ್ಣ-ಗೋದಾವರಿ ನದಿಗಳ ಜೋಡಣೆ ಬಗ್ಗೆ ಹೇಳಿದ್ದಾರೆ. ಅದು ಕಾರ್ಯರೂಪಕ್ಕೆ ಬರಬೇಕಲ್ಲ ಎಂದರು.










