ಹಾರ್ದಿಕ್ ಪಟೇಲ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ…

45
firstsuddi

ಗಾಂಧೀನಗರ : ಗುಜರಾತ್ ನ ಯುವ ಹೋರಾಟಗಾರ, ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ಸಂಚಾಲಕ ಹಾರ್ದಿಕ್ ಪಟೇಲ್ ಅವರು ಜೂನ್ 2ರಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿದ್ದ ಹಾರ್ದಿಕ್ ಪಟೇಲ್ ಮೇ 18ರಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ ಬಳಿಕ ಹಾರ್ದಿಕ್ ಪಟೇಲ್ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು.

ಗುಜರಾತ್ ನಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಮಹತ್ವ ಪಡೆದುಕೊಂಡಿದೆ.