ಹಾಲಕೆರೆಯ ಡಾ.ಅಭಿನವ ಅನ್ನದಾನೇಶ್ವರ ಸ್ವಾಮೀಜಿ ಲಿಂಗೈಕ್ಯ…

71
firstsuddi

ಗದಗ : ಗಜೇಂದ್ರಗಡ ತಾಲೂಕಿನ ಹಾಲಕೆರೆ ಹಾಲಕೆರೆ ಹಾಲಕೆರೆಯ ಅನ್ನದಾನೇಶ್ವರ ಸಂಸ್ಥಾನ ಮಠದ ಡಾ.ಅಭಿನವ ಅನ್ನದಾನೇಶ್ವರ ಡಾ.ಸಂಗನಬಸವ ಸ್ವಾಮೀಜಿ(85) ಲಿಂಗೈಕ್ಯರಾಗಿದ್ದಾರೆ.

ಸ್ವಾಮೀಜಿಗಳು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಶ್ರೀಮಠದಲ್ಲಿ ಇತ್ತೀಚೆಗೆ ನಡೆದ ನ.8, 9 ಮತ್ತು 10 ರಂದು ಮೂರು ದಿನಗಳ ಕಾಲ ಅನ್ನದಾನೇಶ್ವರ ಶ್ರೀಗಳ ಗುರುವಂದನಾ ಹಾಗೂ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರ ಚರಪಟ್ಟಾಧಿಕಾರ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದರು. ಶ್ರೀಗಳ ಅಗಲಿಕೆಯಿಂದ ಅಪಾರ ಭಕ್ತ ಸಮೂಹ ಶೋಕ ಸಾಗರದಲ್ಲಿ ಮುಳುಗಿದೆ.

ಡಾ.ಅಭಿನವ ಅನ್ನದಾನೇಶ್ವರ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವು ದಶಕಗಳ ಕಾಲ ಶ್ರೀಗಳು ಕನ್ನಡ ನಾಡು, ನುಡಿ, ಲಿಂಗಾಯತ ಧರ್ಮಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ.ಅವರ ನಿಧನದಿಂದ ಅಪಾರ ಭಕ್ತ ಸಮೂಹ ಅನಾಥವಾಗಿದೆ. ದೇವರು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಕ್ತ ಸಮೂಹಕ್ಕೆ ಕರುಣಿಸಲಿ ಎಂದು ಕೋರಿದ್ದಾರೆ.