ಹಾಸನದಲ್ಲಿ ಡಿಸೆಂಬರ್ 5 ಕ್ಕೆ ಕಾಂಗ್ರೆಸ್ ಮೆಗಾ ರ‍್ಯಾಲಿಗೆ ಸಿದ್ಧತೆ.

40

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಜೆಡಿಎಸ್ ಪ್ರಾಬಲ್ಯದ ಹಾಸನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಡಿಸೆಂಬರ್ 5 ರಂದು ಮೆಗಾ ರ‍್ಯಾಲಿ ನಡೆಸಲು ಆಡಳಿತಾರೂಢ ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದೆ. ಸಿದ್ದರಾಮಯ್ಯ ಹಿರಿಯ ಸಚಿವರೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ನೇತೃತ್ವದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಬೆಂಗಳೂರು ಟೆಕ್ ಶೃಂಗಸಭೆ 2024 ತಂತ್ರಜ್ಞಾನದ ಪ್ರಗತಿ, ಜಾಗತಿಕ ಸಹಯೋಗಕ್ಕೆ ಈ ಸಮ್ಮಿಟ್ ವಿಶಿಷ್ಟ ವೇದಿಕೆಯಾಗಿದೆ ಸಿಎಂ ಸಿದ್ದರಾಮಯ್ಯ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜಣ್ಣ, ಹೌದು, ಬಲವಾದ ಸಂದೇಶ ರವಾನಿಸಲು ಹಾಸನದಲ್ಲಿ ರಾಜಕೀಯ ಸಮಾವೇಶಕ್ಕೆ ಯೋಜಿಸಲಾಗಿದೆ ಎಂದು ತಿಳಿಸಿದರು. ಈ ಮಧ್ಯೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ತುಮಕೂರಿನಲ್ಲಿ ಡಿಸೆಂಬರ್ 2 ರಂದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಮತ್ತೊಂದು ರ‍್ಯಾಲಿ ನಡೆಯಲಿದೆ.