ಹಾಸನ: ಹಾಸನದ ಅಧಿದೇವತೆ ನಾಡಿನ ಶಕ್ತಿದೇವತೆ ಎಂದು ಪ್ರಸಿದ್ದಿಯಾಗಿರುವ ಹಾಸನಾಂಬ ದೇವಿಯ ದರ್ಶನಕ್ಕೆ ಇನ್ನೊಂದು ದಿನ ಬಾಕಿ ಇದೆ. ಹಾಸನಾಂಬ ದೇಗುಲದ ಬಾಗಿಲನ್ನು ಅಕ್ಟೋಬರ್ 24 ಗುರುವಾರದಂದು ತೆರೆಯಲಾಗುತ್ತದೆ. ಮುಂದಿನ ತಿಂಗಳು ನವೆಂಬರ್ 3 ರವರೆಗು ದೇಗುಲದ ಬಾಗಿಲು ತೆರೆದಿರುತ್ತದೆ ಹಾಗೂ ನವೆಂಬರ್ 3 ರವರೆಗೆ ಭಕ್ತಶದಿಗಳಿಗೆ ದರ್ಶನ ಪಡೆಯಲು ಅವಕಾಶವಿರರುತ್ತದೆ. ವರ್ಷದಿಂದ ವರ್ಷಕ್ಕೆ ಹಲವು ಆಕರ್ಷಣೆಗಳೊಂದಿಗೆ ಗಮನ ಸೆಳೆಯುತ್ತಿರುವ ಹಾಸನಾಂಬೆ ಉತ್ಸವದಲ್ಲಿ ಈ ವರ್ಷ ಮೈಸೂರು ದಸರಾದಲ್ಲಿ ಆಯೋಜಿದ್ದ ದೀಪಾಲಂಕಾರದಂತೆ ಹಾಸನಾಂಬ ದೇಗುಲದಲ್ಲು ದೀಪಾಲಂಕಾರ ಆಯೋಜಿಸಲಾಗಿದೆ. ಇದೇ ಮೊದಲಬಾರಿಗೆ ಫಲಪುಷ್ಪ ಪ್ರದರ್ಶನ, ಹಾಟ್ ಏರ್ ಬಲೂನ್, ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ನಾಳೆ ಅಂದರೆ ಅಕ್ಟೋಬರ್ 24 ರ ಗುರುವಾರ ಅಪರಾಹ್ನ 12 ಗಂಟೆಗೆ ಹಾಸನಾಂಭ ದೇವಿಯ ದೇಗುಲದ ಗರ್ಭಗುಡಿ ಬಾಗಿಲು ತೆರೆಯುತ್ತದೆ. ಕಳೆದ ಬಾರಿ 14 ಲಕ್ಷ ಭಕ್ತರು ದೇವಿಯ ದರ್ಶನ ಪಡೆದಿದ್ದರು. ಈ ವರ್ಷ ಸುಮಾರು 20 ರಿಂದ 25 ಲಕ್ಷ ಭಕ್ತರು ದರ್ಶನ ಪಡೆಯಲು ಬರುವ ನಿರೀಕ್ಷೆಯಲ್ಲಿ ಹಾಸನ ಜಿಲ್ಲಾಡಳಿತ ಇದ್ದು, ಇದಕ್ಕಾಗಿ ಭರ್ಜರಿ ತಯಾರಿ ನಡೆಸಿದೆ. ದೇಗುಲವನ್ನು ಆಕರ್ಷಕವಾಗಿ ಅಲಂಕಾರ ಮಾಡಲಾಗಿದ್ದು ದೇಗುಲದ ಆವರಣದಲ್ಲಿ ಭಕ್ತರ ದರ್ಶನಕ್ಕಾಗಿ ಸರತಿ ಸಾಲುಗಳ ಬ್ಯಾರಿಕೇಡ್ ಹಾಕಲಾಗಿದೆ ಹಾಗೂ ಸಾಂಪ್ರದಾಯಿಕ ಮಾದರಿಯ ಮಾಡೆಲ್‍ಗಳು, ಮಳೆ, ಬಿಸಿಲಿನಿಂದ ರಕ್ಷಣೆಗಾಗಿ ಜ್ಮನ್ ಟೆಂಟ್ ಮತ್ತು ದೊನ್ನೆ ಪ್ರಸಾದ ವಿತರಣೆಗೂ ವ್ಯವಸ್ಥೆ ಮಾಡಲಾಗಿದೆ ಹಾಗೂ ಪೋಲಿಸ್ ಬಿಗಿ ಬಂದೂಬಸ್ತ ಸಹ ಕಲ್ಪಿಸಲಾಗಿದೆ.
ಹಾಸನಾಂಬ ದೇವಿಯ ದರ್ಶನಕ್ಕೆ ಬರುವ ಲಕ್ಷಾಂತರ ಭಕ್ತರ ಗಮನ ಸೆಳೆಯಲು ಹಾಟ್ ಏರ್ ಬಲೂನ್ ಸಂಚಾರ, ಪ್ಯಾರಾ ಗ್ಲೈಡಿಂಗ್, ರಾಜ್ಯಮಟ್ಟದ ಸಮೂಹ ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಳೆದ ವರ್ಷ ಆದ ಕೆಲ ದೋಷಗಳನ್ನು ಸರಿಪಡಿಸಿಕೊಂಡು, ಈ ವರ್ಷ ಅದ್ಧೂರಿ ಹಬ್ಬ ಆಚರಣೆಗೆ ತಯಾರಿ ಮಾಡಿಕೊಂಡಿದ್ದೇವೆ. ಹಾಸನಾಂಬ ದೇವಿಯ ದರ್ಶನಕ್ಕೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಹಾಸನಾಂಬ ದೇವಿಯ ನೇರ ದರ್ಶನ ಪಡೆಯ ಬಯಸುವ ಭಕ್ತರಿಗೆ 1000 ರೂ. ಟಿಕೆಟ್ 300 ರೂ. ಟಿಕೆಟ್ ಹಾಗೂ ವಿಶೇಷ ಗಣ್ಯರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಹಾಗೂ ಸಾಮಾನ್ಯ ಭಕ್ತರ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.










