ಹಾಸನ : ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ ಫಾರ್ಚುನರ್ ಕಾರಿಗೆ ಬೆಂಕಿ ಹಾಕಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಮಟ್ಟನವಿಲೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನಿಂದ ಹಾಸನದ ಕಡೆಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದ 4 ಮಂದಿ ಊಟಕ್ಕಾಗಿ ಕಾರನ್ನು ಮಟ್ಟನವಿಲೆ ಗ್ರಾಮದ ಹೋಟೆಲ್ ಬಳಿ ನಿಲ್ಲಿಸಿದ್ದು, ಈ ವೇಳೆ ಊಟದ ವಿಚಾರವಾಗಿ ಸ್ಥಳೀಯ ಯುವಕರೊಂದಿಗೆ ಜಗಳವಾಗಿದ್ದು, ಇದರಿಂದ ಕೋಪಗೊಂಡ ಯುವಕರ ಗುಂಪು ಫಾರ್ಚುನರ್ ಕಾರಿಗೆ ಬೆಂಕಿ ಹಚ್ಚಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಚನ್ನರಾಯಪಟ್ಟಣ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದರೂ ಕಾರು ಸುಟ್ಟು ಭಸ್ಮವಾಗಿದ್ದು, ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.









