ಹಾಸನ : ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಗರದ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗುಡ್ಡೇನಹಳ್ಳಿ ಗ್ರಾಮದ ನಿವಾಸಿ ದೇವರಾಜು ಎಂಬುವವರ ಮನೆಯಲ್ಲಿ ಗೃಹ ಪ್ರವೇಶ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ಈ ವೇಳೆ ಮಧ್ಯಾಹ್ನದ ಊಟ ಮಾಡಿದ ಕೆಲವೇ ಗಂಟೆಯಲ್ಲಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಆಹಾರದ ಮಾದರಿಯನ್ನು ಪಡೆದು ಪರಿಶೀಲನೆಗೆ ಮುಂದಾಗಿದ್ದು, ಈ ಕುರಿತು ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










