ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆ…

280
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಇಂದು 14 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಬಿಡುಗಡೆಯಾದ ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 10 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 4 ಮಂದಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ.
ಆತಂಕಕಾರಿ ವಿಷಯವೆಂದರೆ ಗ್ರೀನ್‍ಜೋನ್ ಪಟ್ಟಿಗೆ ಸೇರಿಕೊಂಡಿದ್ದ ಹಾಸನ ಜಿಲ್ಲೆಯಲ್ಲಿ ಇಂದು ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯ 30 ವರ್ಷದ ಮಹಿಳೆ ಒಬ್ಬರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಇವರಿಗೆ ಮುಂಬೈನ ನಂಟು ಇರುವುದರ ಬಗ್ಗೆ ಮಾಹಿತಿ ತಿಳಿದು ಬಂದಿದೆ.