ಹಾಸನ : ತಾಯಿಗೆ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಯತ್ನಿಸಿದ ಬಾಲಕಿ ಬಚಾವ್…

88
firstsuddi

ಹಾಸನ : ತಾಯಿ ಮೊಬೈಲ್ ಗೆ ಮೆಸೇಜ್ ಕಳುಹಿಸಿ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಹೊರವಲಯದಲ್ಲಿ ನಡೆದಿದೆ.

ಹಾಸನದ ಖಾಸಗಿ ಶಾಲೆಯಲ್ಲಿ ಒಂಬತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಪೂರ್ವಿಕಾ (15) ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನನ್ನು ಕ್ಷಮಿಸಿ ಎಂದು ತಾಯಿ ಮೊಬೈಲ್ ಗೆ ಮೆಸೇಜ್ ಕಳುಹಿಸಿ ನಗರದ ಹೊರವಲಯದ ಕೆರೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಮೆಸೇಜ್ ನೋಡಿದ ನಂತರ ಕೂಡಲೇ ಪೋಷಕರು ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದಿಂದ ಬಾಲಕಿಗಾಗಿ ಹುಡುಕಾಟ ನಡೆಸಿದ್ದರು. ಬಾಲಕಿ ಕೆರೆಯಲ್ಲಿದ್ದ ಮುಳ್ಳಿನ ಪೊದೆಗೆ ಸಿಲುಕಿ ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.