ಹಾಸನ : ಬಟ್ಟೆ ಕಾರ್ಖಾನೆ ಕಾರ್ಮಿಕರ ಧಿಡೀರ್ ಪ್ರತಿಭಟನೆ, ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ…

392

ಹಾಸನ : ಕೈಗಾರಿಕಾ ವಲಯದಲ್ಲಿ ಇರುವ ಹಿಮ್ಮತ್ ಸಿಂಕಾ ಬಟ್ಟೆ ಕಾರ್ಖಾನೆ ಬಳಿ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದರು. ವಿನಾಕಾರಣ ಕಾರ್ಮಿಕರ ಮೇಲೆ ಹಲ್ಲೆ ಮತ್ತು ದೌರ್ಜನ್ಯ ವಿರೋಧಿಸಿ ಆಡಳಿತ ಮಂಡಳಿ ವಿರುದ್ಧ ಕಲ್ಲು ತೂರಾಡಿ ಆಕ್ರೋಶ ವ್ಯಕ್ತಪಡಿಸಿದರು. ಹಿಮ್ಮತ್ ಸಿಂಕಾ ಕಾರ್ಖಾನೆಯಲ್ಲಿ 4 ಸಾವಿರಕ್ಕೂ ಅಧಿಕ ಮಂದಿ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಬಂದು ಕೆಲಸ ಮಾಡುತ್ತಿದ್ದು, ಈ ದಿನ ಕೆಲಸಕ್ಕೆ ಹಾಜರಾಗದೆ ಸಾವಿರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗಿಯಾದರು. ಕಾರ್ಮಿಕ ಕಾಯ್ದೆ ಉಲ್ಲಂಘಿಸಿ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದಾರೆ ಹಾಗೂ ಇಬ್ಬರು ಕಾರ್ಮಿಕರ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದು, ಪೊಲೀಸ್ ವಾಹನದ ಮೇಲೂ ಪ್ರತಿಭಟನಾಕಾರರು ಕಲ್ಲು ತೂರಾಟ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.