ಹಾಸನ : ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದಲ್ಲಿ ಎರಡು ಚಿರತೆಗಳು ಒಟ್ಟಿಗೆ ಪ್ರತ್ಯಕ್ಷ…

243

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಚಿರತೆಯ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರು ಆತಂಕ ಪಡುವಂತಾಗಿದೆ. ಶ್ರವಣಬೆಳಗೊಳದ ಚಂದ್ರಗಿರಿ ಬೆಟ್ಟದಲ್ಲಿ ಎರಡು ಚಿರತೆಗಳು ಒಟ್ಟಿಗೆ ಪ್ರತ್ಯಕ್ಷವಾಗಿದ್ದು, ರಾತ್ರಿ ವೇಳೆ ಗನ್ನಿಕಡದ ಹೇಮಾವತಿ ಸೇತುವೆ ಬಳಿ ಚಿರತೆ ಸಂಚರಿಸುವ ದೃಶ್ಯ ವಾಹನ ಸವಾರರ ಮೊಬೈಲ್‍ನಲ್ಲಿ ಸೆರೆಯಾಗಿದೆ. ಜನರು ಹಾಗೂ ಪ್ರವಾಸಿಗರು ಓಡಾಡುವ ಜಾಗದಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು, ಈ ಹಿಂದೆ ಕೂಡಾ ಚಂದ್ರಗಿರಿ ಹಾಗೂ ವಿಂದ್ಯಗಿರಿ ಬೆಟ್ಟದ ತಪ್ಪಲಿನಲ್ಲಿ ಚಿರತೆಗಳು ಪ್ರತ್ಯಕ್ಷವಾಗಿದ್ದವು. ಚಿರತೆಗಳ ಹಾವಳಿಯಿಂದ ಆತಂಕಗೊಂಡಿರುವ ಸ್ಥಳೀಯರು ಶೀಘ್ರವೇ ಚಿರತೆಗಳನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದಾರೆ.