ಹಾಸನ- ಸುಟ್ಟುಹೋದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ…

301
firstsuddi

ಹಾಸನ : ಸುಟ್ಟು ಹೋದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಬೇಲೂರು ಪಟ್ಟಣದ ಯಗಚಿ ನದಿದಂಡೆ ಬಳಿ ನಡೆದಿದೆ. ಮೃತ ಮಹಿಳೆಯನ್ನು ಸುಮಾರು 40 ವರ್ಷ ಪ್ರಾಯದವರು ಎಂದು ಅಂದಾಜಿಸಲಾಗಿದ್ದು, ದುಷ್ಕರ್ಮಿಗಳು ಮಹಿಳೆಯನ್ನು ಕೊಂದು ಮೃತದೇಹವನ್ನು ಗುರುತು ಸಿಗದಂತೆ ಪೆಟ್ರೋಲ್ ಸುರಿದು ಸುಟ್ಟು ಪರಾರಿಯಾಗಿದ್ದು, ಈ ಕುರಿತು ಬೇಲೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಂತಕರಿಗಾಗಿ ಬಲೆಬೀಸಿದ್ದಾರೆ.