ಹಾಸನ : ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹೇಳಿದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ಮಚ್ಚಿನೇಟು…

294
firstsuddi

ಹಾಸನ : ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಹೇಳಿದ ಪಟ್ಟಣ ಪಂಚಾಯಿತಿ ಸದಸ್ಯನಿಗೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಸುಭಾನ್ ಷರೀಫ್, ಹಲ್ಲೆಗೊಳಗಾದ ಅರಕಲಗೂಡು ಪಟ್ಟಣ ಪಂಚಾಯಿತಿ ಸದಸ್ಯ ಎನ್ನಲಾಗಿದ್ದು, ಕೋಳಿ ಅಂಗಡಿ ಸುತ್ತ ಮುತ್ತ ಸ್ವಚ್ಛತೆ ಕಾಪಾಡುವಂತೆ ಆಸಿಫ್ ಷರೀಫ್ ಎಂಬುವವರಿಗೆ ಹೇಳಿದ್ದು, ಇದರಿಂದ ಕೋಪಗೊಂಡ ಆಸಿಫ್ ಷರೀಫ್ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದ್ದು, ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.