ಹಿಂದೂ ದೇವತೆಗಳಿಗೆ ಅಪಮಾನ, ಭಾರತ ವಿರೋಧಿ ಭಾವನೆ ಪ್ರಚಾರ: ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‍ಐಆರ್.

37

ನವದೆಹಲಿ: ಹಿಂದೂ ದೇವತೆಗಳಿಗೆ ಅಪಮಾನ, ದೇಶ ವಿರೋಧಿ ಭಾವನೆ ಹರಡುವಿಕೆ ಮತ್ತು ಧಾರ್ಮಿಕ ವಿಚಾರಗಳ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸಿದ ಆರೋಪದ ಮೇಲೆ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ದೆಹಲಿ ಕೋರ್ಟ್ ಇಂದು ಆದೇಶ ನೀಡಿದೆ. 2016-17ರಲ್ಲಿ ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿನ ಕೆಲ ಪೋಸ್ಟ್ ಗಳಿಗೆ ಸಂಬಂಧಿಸಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ದಿಲ್ಲಿ ನ್ಯಾಯಾಲಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಹಿಂದೂ ದೇವತೆಗಳಿಗೆ ಅವಮಾನ, ಭಾರತ ವಿರೋಧಿ ಭಾವನೆ ಪ್ರಚಾರ, ಧಾರ್ಮಿಕ ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದಲ್ಲಿ ಪತ್ರಕರ್ತೆ ರಾಣಾ ಅಯ್ಯೂಬ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಸೂಚಿಸಿದ್ದು, ಈ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಸುವಂತೆ ದಿಲ್ಲಿ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.