ಬೆಂಗಳೂರು : ಹೃದಯಾಘಾತದಿಂದ ನಿಧನರಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರ ಅಂತ್ಯಕ್ರಿಯೆಯನ್ನು ಬನಶಂಕರಿ ಚಿತಾಗಾರದಲ್ಲಿ ನೆರವೇರಿಸಲಾಯಿತು. ಪುತ್ರರಾದ ಕರ್ಣ ಹಾಗೂ ಹಿಮವಂತ್, ರವಿ ಬೆಳೆಗೆರೆ ಅವರ ಅಂತಿಮ ವಿಧಿ ವಿಧಾನವನ್ನು ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿಸಿದರು. ರವಿ ಬೆಳೆಗೆರೆ ಅವರು ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದರು. ಬಳಿಕ ಅವರ ಪಾರ್ಥೀವ ಶರೀರವನ್ನು ಕನಕಪುರ ರಸ್ತೆಯಲ್ಲಿ ಇರುವ ಕರಿಷ್ಮಾ ಹಿಲ್ಸ್ ಮನೆಗೆ ತರಲಾಗಿತ್ತು. ಮನೆಯಲ್ಲಿ ಕುಟುಂಬಸ್ಥರು ಆಪ್ತರು ಅಂತಿಮ ದರ್ಶನ ಪಡೆದ ಬಳಿಕ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಪದ್ಮನಾಭ ನಗರದಲ್ಲಿರುವ ಪ್ರಾರ್ಥನಾ ಸ್ಕೂಲ್ ಮೈದಾನದಲ್ಲಿ ಪ್ರಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಅವಕಾಶ ಮಾಡಿಕೊಡಲಾಗಿತ್ತು.










