ಹಿಜಾಬ್‍ಗಾಗಿ ಪರೀಕ್ಷೆ ಬಹಿಷ್ಕರಿಸಿ ಮನೆಗೆ ತೆರಳಿದ ಇಬ್ಬರು ವಿದ್ಯಾರ್ಥಿನಿಯರು…

63
firstsuddi

ಉಡುಪಿ : ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ. ಈ ಮಧ್ಯೆ ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಇಬ್ಬರು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಆದರೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಹೊರ ನಡೆದಿದ್ದಾರೆ.

ಉಡುಪಿಯ ಹಿಜಾಬ್ ಹೋರಾಟಗಾರ್ತಿಯರಾದ ಮಹಿಳಾ ಸರ್ಕಾರಿ ಪಿಯು ಕಾಲೇಜಿನ ಆಲಿಯಾ ಅಸಾದಿ ಮತ್ತು ರೇಷಂ ಕೊನೆ ಕ್ಷಣದಲ್ಲಿ ಹಾಲ್ ಟಿಕೆಟ್ ಪಡೆದಿದ್ದರು. ತಮ್ಮ ಕಾಲೇಜಿನಲ್ಲಿ ಬೆಳಗ್ಗೆ 10 ಗಂಟೆಗೆ ಹಾಲ್ ಟಿಕೆಟ್ ಪಡೆದ ಇಬ್ಬರು ವಿದ್ಯೋದಯ ಕಾಲೇಜಿಗೆ ಆಗಮಿಸಿದ್ದರು. ಕಾಲೇಜಿಗೆ ಬಂದ ಬಳಿಕ ಈ ಇಬ್ಬರೂ ಹಿಜಬ್ ಧರಿಸಿಯೇ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಈ ವಿಚಾರ ತಿಳಿದು ಉಡುಪಿಯ ತಹಶೀಲ್ದಾರ್ ಅರ್ಚನಾ ಭಟ್ ಪರೀಕ್ಷಾ ಕೇಂದ್ರಕ್ಕೆ ಬಂದು ವಿದ್ಯಾರ್ಥಿನಿಯರ ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಹಿಜಾಬ್ ಮುಖ್ಯ ಎಂಬ ಹಠಕ್ಕೆ ಬಿದ್ದ ವಿದ್ಯಾರ್ಥಿನಿಯರು ಕೊನೆಗೆ ಪರೀಕ್ಷಾ ಕೇಂದ್ರದಿಂದ ಮನೆಗೆ ತೆರಳಿದ್ದಾರೆ.