ಹಿಜಾಬ್-ಕೇಸರಿ ವಿವಾದ – ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು : ಸಿಎಂ.

83
firstsuddi

ಬೆಂಗಳೂರು : ಹಿಜಾಬ್-ಕೇಸರಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಶಾಂತಿಗೆ ಭಂಗ ತರುವ ಕೆಲಸ ಆಗಬಾರದು. ಶಾಲೆಯಲ್ಲಿ ಎರಡು ಕಡೆಯಿಂದಲೂ ಸಮಸ್ಯೆ ಉಂಟಾಗಿದೆ. ಇದರಿಂದ ಯಾರಿಗೂ ರಾಜಕೀಯ ಲಾಭ ಆಗಲ್ಲ. ಶಾಂತಿ ಕದಡುವ ಹೇಳಿಕೆ ಬೇಡ. ಮಾತನಾಡುವುದನ್ನು ನಿಲ್ಲಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಸಮವಸ್ತ್ರ ಪ್ರಕರಣದ ಅರ್ಜಿಯೂ ತ್ರಿಸದಸ್ಯ ಪೀಠಕ್ಕೆ ವರ್ಗಾವಣೆ ಆಗಿದೆ. ಈ ಬಗ್ಗೆ ಮಧ್ಯಾಹ್ನ ಕೇಸ್ ವಿಚಾರಣೆ ನಡೆಯಲಿದೆ. ಕೋರ್ಟ್ ತೀರ್ಪಿಗಾಗಿ ಕಾಯೋಣ. ಸಂಜೆ ಶಿಕ್ಷಣ ಸಚಿವ ಮತ್ತು ಗೃಹ ಸಚಿವರ ಜೊತೆ ಸಭೆ ನಡೆಸಲಾಗುವುದು. ಶಾಲಾ ಕಾಲೇಜುಗಳಲ್ಲಿ ಮೊದಲಿನ ತರಹ ಸೌಹಾರ್ದ ಶಾಂತಿ ತರುವ ಬಗ್ಗೆ ಕ್ರಮ ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.