ಹಿಜಾಬ್–ಕೇಸರಿ ಸಂಘರ್ಷ ; ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ…

67
firstsuddi

ಬೆಂಗಳೂರು : ರಾಜ್ಯದೆಲ್ಲೆಡೆ ಹಿಜಾಬ್-ಕೇಸರಿ ಶಾಲು ವಿವಾದ ಭುಗಿಲೆದ್ದಿದೆ. ಈ ಮಧ್ಯೆ ಹಿಜಾಬ್-ಕೇಸರಿ ವಿವಾದ ಹೈಕೋರ್ಟ್ ಅಂಗಳಕ್ಕೆ ತಲುಪಿದ್ದು ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಯಲಿದ್ದು, ಹೈಕೋರ್ಟ್ ಏನು ತೀರ್ಪು ನೀಡಲಿದೆ ಎಂಬುದು ಇಲ್ಲಿ ಮುಖ್ಯವಾಗಿದೆ.

ಇನ್ನೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಪುಟ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಹಿಜಾಬ್ ವಿವಾದ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಸಭೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ ನಾರಾಯಣ ಮತ್ತು ಇತರ ಜಿಲ್ಲಾ ಉಸ್ತುವಾರಿ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಸಂಬಂಧಪಟ್ಟವರು ಭಾಗವಹಿಸಲಿದ್ದಾರೆ.

ಸದ್ಯ ವಿದ್ಯಾರ್ಥಿಗಳ ಹೋರಾಟವನ್ನು ತಣ್ಣಗಾಗಿಸಲು ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಿದೆ.