ಹಿಜಾಬ್, ಕೇಸರಿ ಸಂಘರ್ಷ – ಹೈಕೋರ್ಟ್‍ನ ಮೌಖಿಕ ಆದೇಶ ಪ್ರಶ್ನಿಸಿ ಸುಪ್ರೀಕೋರ್ಟ್‍ಗೆ ಮೇಲ್ಮನವಿ…

82
firstsuddi

ನವದೆಹಲಿ : ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ನಲ್ಲಿ ಸಲ್ಲಿಕೆಯಾದ ಅರ್ಜಿಗಳ ಸಂಪೂರ್ಣ ವಿಚಾರಣೆ ಬಾಕಿಯಿರುವಾಗಲೇ ಹೈಕೋರ್ಟ್‍ನ ಮೌಖಿಕ ಮಧ್ಯಂತರ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.

ಶಾಲೆ-ಕಾಲೇಜುಗಳಲ್ಲಿ ಧಾರ್ಮಿಕ ಗುರುತು ಇರುವ ಬಟ್ಟೆಗಳನ್ನು ಧರಿಸಬಾರದು, ಹಿಜಾಬ್ ಸಂಘರ್ಷ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆ-ಕಾಲೇಜುಗಳನ್ನು ಪುನಾರಂಭ ಮಾಡಬೇಕೆಂದು ಹೈಕೋರ್ಟ್ ನಿನ್ನೆ ಮಧ್ಯಂತರ ಆದೇಶ ನೀಡಿತ್ತು. 

ಕರ್ನಾಟಕ ಹೈಕೋರ್ಟ್ ನಿನ್ನೆ ನೀಡಿರುವ ಮೌಖಿಕ ಆದೇಶವನ್ನು ಪ್ರಶ್ನಿಸಿ ತಮ್ಮ ವಕೀಲರ ಮೂಲಕ ಅರ್ಜಿದಾರರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಸಂವಿಧಾನದ ಆಶಯಗಳಿಗೆ ವಿರುದ್ಧವಾದ, ಧಾರ್ಮಿಕ ಸ್ವಾತಂತ್ರ್ಯವನ್ನು ಪಾಲಿಸುವ ಹಕ್ಕನ್ನು ವಿರೋಧಿಸುವ ತೀರ್ಪನ್ನು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ನೀಡಿದೆ ಎಂದು ಸುಪ್ರೀಂಕೋರ್ಟ್ ಗೆ ಸಲ್ಲಿಸಲಾದ ಮೇಲ್ಮನವಿ ಅರ್ಜಿಯಲ್ಲಿ ತಿಳಿಸಲಾಗಿದೆ.