ಹಿಜಾಬ್ ತೀರ್ಪು : ಸುಪ್ರೀಂಕೋರ್ಟ್ ಮೊರೆ ಹೋದ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ.

92
firstsuddi

ನವದೆಹಲಿ : ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿರುವ ಮಹತ್ವದ ತೀರ್ಪು ಪ್ರಶ್ನಿಸಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಮಂಡಳಿಯು ತನ್ನ ಕಾರ್ಯದರ್ಶಿ ಮೊಹಮ್ಮದ್ ಫಜ್ಲುರ್ ರಹೀಮ್ ಜೊತೆಗೆ ಇಬ್ಬರು ಅರ್ಜಿದಾರರಾದ ಮುನಿಸಾ ಬುಶ್ರಾ ಮತ್ತು ಜಲೀಸಾ ಸುಲ್ತಾನಾ ಯಾಸೀನ್ ಅವರ ಮೂಲಕ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ಇಸ್ಲಾಮಿಕ್ ಧರ್ಮಗುರುಗಳ ಸಂಘಟನೆಯಾದ ಸಮಸ್ತ ಕೇರಳ ಜೆಮ್-ಇಯ್ಯತುಲ್ ಉಲಮಾ ಮುಸ್ಲಿಮರು ಹಿಜಬ್ ಧರಿಸುವುದು ಕಡ್ಡಾಯ ಎಂದು ಹೇಳಿಕೆ ನೀಡಿದ ಬಳಿಕ ಈ ಅರ್ಜಿ ಸಲ್ಲಿಕೆಯಾಗಿದ್ದು, ಹೈಕೋರ್ಟಿನ ತೀರ್ಪು ಪವಿತ್ರ ಕುರಾನ್ ಮತ್ತು ಹದೀಸ್ ಗಳ ತಪ್ಪಾದ ವ್ಯಾಖ್ಯಾನ ಮತ್ತು ಇಸ್ಲಾಮಿಕ್ ಕಾನೂನಿನ ತಪ್ಪು ತಿಳುವಳಿಕೆಯನ್ನು ಆಧರಿಸಿದೆ ಎಂದು ಮಂಡಳಿ ಅರ್ಜಿಯಲ್ಲಿ ದೂರಿದೆ.

ಕಳೆದ ವಾರ ಹಿಜಾಬ್ ಪ್ರಕರಣದ ತೀರ್ಪನ್ನು ಪ್ರಶ್ನಿಸುವ ಅರ್ಜಿಗಳ ತುರ್ತು ಪಟ್ಟಿಯ ಕೋರಿಕೆಯನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಅವರು ತಿರಸ್ಕರಿಸಿದ್ದರು.