ಬೆಂಗಳೂರು : ಇದೇ ಮಾರ್ಚ್.28(ಸೋಮವಾರ)ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿ.ಶ್ರೀನಿವಾಸ್ ಮೂರ್ತಿ ಅವರು, ಹಿಜಾಬ್ ಧರಿಸಿಕೊಂಡು ಬಂದರೆ ಎಸ್ಎಸ್ಎಲ್ಸಿ ಪರೀಕ್ಷಗೆ ಪ್ರವೇಶ ನಿರಾಕರಿಸಲಾಗಿದ್ದು, ನಿಯಮ 1995ರ ನಿಯಮ 11ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಸಮವಸ್ತ್ರ ಜಾರಿ ಮಾಡಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಇನ್ನು ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸಿರುವ ಸಮವಸ್ತ್ರ ಕಡ್ಡಾಯವಾಗಿ ಧರಿಸತಕ್ಕದ್ದು ಎಂದು ತಿಳಿಸಿದ್ದಾರೆ.










