ಹಿಜಾಬ್ ಪರ ಗೋಡೆ ಬರಹ ಪತ್ತೆ – ಪ್ರಕರಣ ದಾಖಲು…

75
firstsuddi

ಉಡುಪಿ : ನ್ಯಾಯಾಲಯ ಹಿಜಾಬ್ ವಿರುದ್ಧ ಆದೇಶ ನೀಡಿದ ಬೆನ್ನಲ್ಲೇ ಮಲ್ಪೆ ಸಮೀಪದ ಬೈಲಕೆರೆ ಎಂಬಲ್ಲಿ ಅನಧಿಕೃತ ಕಟ್ಟಡವೊಂದರ ಗೋಡೆಯಲ್ಲಿ ಹಿಜಾಬ್ ಪರ ಗೋಡೆ ಬರಹ ಪತ್ತೆಯಾಗಿದೆ.

ಮಾಹಿತಿ ತಿಳಿದು ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದವರನ್ನು ಬಂಧಿಸುವಂತೆ ಆಗ್ರಹಿಸಿದರು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ವೃತ್ತ ನಿರೀಕ್ಷಕ ಶರಣಬಸವ ಪಾಟೀಲ್ ಹಾಗೂ ಮಲ್ಪೆ ಠಾಣಾಧಿಕಾರಿ ಸಕ್ತಿವೇಲು ಹಿಂದೂ ಕಾರ್ಯಕರ್ತರ ಮನವೊಲಿಸಿ ಸ್ಥಳದಿಂದ ತೆರಳುವಂತೆ ಮನವೊಲಿಸಿದರು.

ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.