ಹಿಜಾಬ್ ಬೆನ್ನಲ್ಲೇ ಸಿಂಧೂರ ವಿವಾದ – ಕುಂಕುಮ ಹಚ್ಚಿಕೊಂಡು ಕಾಲೇಜಿಗೆ ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ…

109
firstsuddi

ವಿಜಯಪುರ : ಹಿಜಾಬ್ ವಿವಾದದ ಬೆನ್ನಲ್ಲೇ ಇದೀಗ ಸಿಂಧೂರ ವಿವಾದ ಆರಂಭವಾಗಿದೆ. ಇಂಡಿ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಣೆಗೆ ಕುಂಕುಮ ಹಚ್ಚಿಕೊಂಡು ಬಂದಿದ್ದ ವಿದ್ಯಾರ್ಥಿಯೋರ್ವನಿಗೆ ತರಗತಿ ಪ್ರವೇಶಕ್ಕೆ ನಿರಾಕರಿಸಲಾಗಿದೆ.

ಇಂದು ಕಾಲೇಜಿಗೆ ಬಂದ ವಿದ್ಯಾರ್ಥಿ ಗಂಗಾಧರ ಬಡಿಗೇರ್ ಹಣೆಗೆ ಸಿಂಧೂರ ಇಟ್ಟುಕೊಂಡು ಬಂದಿದ್ದ. ಇದನ್ನು ಗಮನಿಸಿದ ಕಾಲೇಜಿನ ದೈಹಿಕ ಉಪನ್ಯಾಸಕ ಸಂಗಮೇಶ ಗೌಡ ತರಗತಿ ಪ್ರವೇಶಕ್ಕೆ ಅವಕಾಶ ಕೊಟ್ಟಿಲ್ಲ. ನಾವು ಕಾಲೇಜ್ ಗೆ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬಂದಿಲ್ಲ. ಕುಂಕುಮ ಹಾಕಲು ಯಾಕೆ ಅನುಮತಿ ಇಲ್ಲ ಎಂದು ಗಂಗಾಧರ ಬಡಿಗೇರ್ ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.