ಉಡುಪಿ : ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್ ಹಾಕಿ ಕಾಲೇಜಿಗೆ ಹೋಗುತ್ತೇವೆ. ಆನ್ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ಎಂದು ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದ್ದಾರೆ.
ಸರ್ಕಾರಿ ಕಾಲೇಜಿನಲ್ಲಿ ನಮಗೆ ಹಕ್ಕು ಸಿಗದಿದ್ದರೆ ನಾವು ಬೇರೆಡೆ ಅದನ್ನು ನಿರೀಕ್ಷಿಸಲು ಸಾಧ್ಯವೇ?. ಸೈನ್ಸ್ ವಿದ್ಯಾರ್ಥಿಗಳು ಇರೋದ್ರಿಂದ ನಮಗೆ ಆನ್ ಲೈನ್ ಕ್ಲಾಸ್ನಲ್ಲಿ ಲ್ಯಾಬ್ ಅಟೆಂಡ್ ಮಾಡಲು ಆಗುವುದಿಲ್ಲ. ನಮಗೆ ಒಂದು ತಿಂಗಳ ತರಗತಿ ನಷ್ಟ ಆಗಿದೆ. ಕಾಲೇಜಿನ ಉಳಿದ ಮುಸಲ್ಮಾನ ವಿದ್ಯಾರ್ಥಿನಿಯರು ಹಿಜಬ್ ಧರಿಸಲು ಸಿದ್ಧರಿದ್ದಾರೆ ಆದರೆ ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದಿಂದ ಅವರು ಭಯ ಗೊಂಡಿದ್ದಾರೆ.
ಸರ್ಕಾರಿ ಕಾಲೇಜ್ ಆಗಿರುವುದರಿಂದ ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ತಾರತಮ್ಯ ಮಾಡಬೇಡಿ. ನಮಗೆ ನಡೆಯುತ್ತಿರುವ ದೌರ್ಜನ್ಯ ಪ್ರತಿದಿನ ಮಾಧ್ಯಮಗಳಲ್ಲಿ ನಮ್ಮ ಸುದ್ದಿಗಳನ್ನು ನೋಡಿ ಇತರ ಮುಸ್ಲಿಂ ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ ಅವರು ನೈತಿಕವಾಗಿ ನಮಗೆ ಬೆಂಬಲ ಸೂಚಿಸಿದ್ದಾರೆ ಆದರೆ ಯಾರೂ ಮುಂದೆ ಬರುತ್ತಿಲ್ಲ. ಅವರು ಎಜುಕೇಶನ್ ತುಂಬಾ ಇಂಪಾರ್ಟೆಂಟ್ ಎಂದು ನಮ್ಮ ಜೊತೆ ಪ್ರತಿಭಟನೆಗೆ ಬರದೇ ಕ್ಲಾಸಿಗೆ ಹೋಗುತ್ತಿದ್ದಾರೆ. ನಮಗೂ ಶಿಕ್ಷಣ ಮುಖ್ಯ ಅದರ ಜೊತೆಗೆ ಧರ್ಮ ಮತ ನಮ್ಮ ಹಿಜಬ್ ಹಕ್ಕು ಮುಖ್ಯ. ಹಿಜಾಬ್ ಇಲ್ಲದೆ ತರಗತಿಯಲ್ಲಿ ಕುಳಿತುಕೊಳ್ಳಲು ನಮಗೆ ಕಂಫರ್ಟ್ ಆಗುವುದಿಲ್ಲ. ಕಾಲೇಜಿನ ಸಮವಸ್ತ್ರದ ಶಾಲ್ ನಲ್ಲೇ ನಾವು ಹಿಜಬ್ ತಯಾರಿಸಿ ಅದನ್ನು ತೊಟ್ಟುಕೊಂಡು ಕ್ಲಾಸಿನಲ್ಲಿ ಕುಳಿತುಕೊಳ್ಳುತ್ತೇವೆ. ನಾವು ಬೇರೆ ಯಾವುದೇ ವಿಚಾರಕ್ಕೆ ಹಠಹಿಡಿದು ಕುಳಿತುಕೊಂಡಿಲ್ಲ ಎಂದರು.
ಕಾಲೇಜಿನಲ್ಲಿ ಹಿಂದಿನಿಂದಲೂ ಪರಂಪರೆಯಿದೆ ಹಿಜಬ್ ಗೆ ಅವಕಾಶ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ ಆದರೆ ನಮ್ಮ ಸೀನಿಯರ್ ಗಳು ಧರಿಸುತ್ತಿದ್ದನ್ನು ನಾವು ನೋಡಿದ್ದೇವೆ. ನಮಗೆ ಹಿಜಬ್ ಧರಿಸಿ ಕ್ಲಾಸ್ ಗೆ ಬರಲು ಆಡಳಿತ ಮಂಡಳಿಗೆ ನಮ್ಮ ಶಿಕ್ಷಣದ ಬಗ್ಗೆ ಯಾವುದೇ ಒಲವು ಇಲ್ಲ. ನಾವು ಉತ್ತಮವಾದ ಶಿಕ್ಷಣ ಪಡೆದು ಮುಂದೆ ಏನಾದರೂ ಜೀವನದಲ್ಲಿ ಸಾಧಿಸಬೇಕೆಂದು ಇದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ ಉಡುಪಿ ಪದವಿ ಪೂರ್ವ ಕಾಲೇಜಿನ ಹಿಬಾಜ್ ವಿವಾದ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ.










