ನವದೆಹಲಿ : ಹಿಜಾಬ್ ವಿವಾದದ ಕುರಿತ ಅರ್ಜಿ ಇಂದು ಮುಖ್ಯನ್ಯಾಯಮೂರ್ತಿ ಎನ್.ವಿ. ರಮಣ ಅವರ ಮುಂದೆ ಪ್ರಸ್ತಾಪಿಸಲಾಗಿದ್ದು, ಇನ್ನೆರಡು ದಿನ ಕಾಯಿರಿ ಎಂದು ಎನ್.ವಿ.ರಮಣ ಅವರು ಹೇಳಿದ್ದಾರೆ.
ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಗಳನ್ನು ಇಂದು ನ್ಯಾಯಮೂರ್ತಿ ಎನ್.ವಿ. ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು. ಮೇಲ್ಮನವಿದಾರರ ಪರವಾಗಿ ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಈ ವಿಷಯವನ್ನು ಪ್ರಸ್ತಾಪಿಸಿದರು. ಈ ವೇಳೆ ನ್ಯಾಯಮೂರ್ತಿಗಳು ನಾವು ಅರ್ಜಿಯನ್ನು ಪರಿಗಣಿಸುತ್ತೇವೆ. ಇಂದು ಸಾಧ್ಯವಾಗುವುದಿಲ್ಲ, ದಯವಿಟ್ಟು ಇನ್ನೂ ಎರಡು ದಿನ ಕಾಯಿರಿ ಎಂದು ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್ನ ಹಿಜಾಬ್ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಗಳನ್ನು ತುರ್ತು ವಿಚಾರಣೆ ನಡೆಸಲು ಮಾರ್ಚ್ ತಿಂಗಳಲ್ಲಿ ಸುಪ್ರೀಂಕೋರ್ಟ್ ನಿರಾಕರಿಸಿತ್ತು.










