ನವದೆಹಲಿ : ಹಿಜಬ್ ವಿವಾದದ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ಹಿಜಬ್ ಹೆಸರಿನಲ್ಲಿ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ನಾವು ಅವರ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಆಕೆ ಭಿನ್ನಾಭಿಪ್ರಾಯ ತೋರುವುದಿಲ್ಲ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಹಿಜಬ್ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಒಂದೆಡೆ ಹಿಜಾಬ್ ಧರಿಸುವುದು ತಮ್ಮ ಹಕ್ಕು ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರೆ, ಮತ್ತೊಂದೆಡೆ ಕಾಲೇಜು ಆಡಳಿತ ಮಂಡಳಿಯು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದರ ಮಧ್ಯೆಯೂ ಹಿಜಬ್ ವಿವಾದದ ಪ್ರಕರಣವು ಹೈಕೋರ್ಟ್ ನಲ್ಲಿದೆ. ಒಟ್ಟಿನಲ್ಲಿ ಹೈಕೋರ್ಟ್ ತೀರ್ಪಿನ ಬಳಿಕ ಎಲ್ಲಾ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ.










