ಹಿರಿಯ ನಟ ಸತ್ಯಜಿತ್ ಆರೋಗ್ಯ ಸ್ಥಿತಿ ಗಂಭೀರ – ಆಸ್ಪತ್ರೆಗೆ ದಾಖಲು…

86
firstsuddi

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ನೀಡಲಾಗುತ್ತಿದೆ.

ಈಗಾಗಲೇ ಗ್ಯಾಂಗ್ರಿನ್ ನಿಂದ ಎಡಗಾಲು ತೆಗೆಯಲಾಗಿದೆ. ಪ್ರಸ್ತುತ ಅವರ ಪರಿಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಿಪಿ ಮತ್ತು ಶುಗರ್ ಏರುಪೇರಾಗುತ್ತಿದ್ದು, ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ. ಆದರೆ ವೈದ್ಯರು ಪ್ರಯತ್ನವನ್ನು ಮುಂದುವರಿಸಿದ್ದಾರೆ ಎಂದು ಪುತ್ರ ಆಕಾಶ್ ಜಿತ್ ಮಾಹಿತಿ ನೀಡಿದ್ದಾರೆ.

ಸತ್ಯಜಿತ್ ಅವರು ಅಪ್ಪು, ಅರಸು, ಅಭಿ, ಆಪ್ತಮಿತ್ರ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುವ ಮೂಲಕ ಅವರು ಜನಪ್ರಿಯತೆ ಪಡೆದಿದ್ದಾರೆ.