ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ 76 ವರ್ಷ ವಯಸ್ಸಾಗಿತ್ತು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಹಿರಿಯ ನಟ ಸರಿಗಮ ವಿಜಿ ಅವರ ಅಗಲಿಕೆಗೆ ಅವರ ಕುಟುಂಬದವರು ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ 9:45ಕ್ಕೆ ಕೊನೆಉಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದಲೂ ಸರಿಗಮ ವಿಜಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು, ಆದರೆ ಅದು ಸುಳ್ಳಾಗಿದೆ. ಸತತ ಚಿಕಿತ್ಸೆ ನಂತರ ಇದೀಗ ವಿಜಿ ಅವರು ವಿಧಿವಶರಾಗಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ ಬೆಳಿಗ್ಗೆ 10 ರಿಂದ 12 ಗಂಟೆಗೆ ಅಷ್ಟ್ರಲ್ಲಿ ಚಾಮರಾಜಪೇಟೆಯ ಟಿ.ಆರ್.ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.