ಹಿರೇಮಗಳೂರಿನಲ್ಲಿ ಕರ್ನಾಟಕ ಸಂಗೀತದ ಪಿತಾಮಹ ಸಂತ ಶ್ರೀ ತ್ಯಾಗರಾಜ ಆರಾಧನೆ…

77
firstsuddi

ಚಿಕ್ಕಮಗಳೂರು : ಕರ್ನಾಟಕ ಸಂಗೀತದ ಪಿತಾಮಹ ಸಂತ ಶ್ರೀ ತ್ಯಾಗರಾಜರು, ದಾಸಶ್ರೇಷ್ಠ ಶ್ರೀ ಪುರಂದರದಾಸರು ಮತ್ತು ಕನಕದಾಸರ ಆರಾಧನಾ ಮಹೋತ್ಸವ ಸಾಂಸ್ಕೃತಿಕ ಸಂಘದ ವತಿಯಿಂದ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಮೇ.21ರಂದು ನಡೆಯಲಿದೆ.

ಅಂದು ಬೆಳಿಗ್ಗೆ 9.30ಕ್ಕೆ ಸ್ಥಳೀಯ ಮತ್ತು ಹೊರ ಊರುಗಳ ಸಂಗೀತಗಾರರಿಂದ ಪಿಳ್ಳಾರಿ ಗೀತೆಗಳು ಮತ್ತು ಉತ್ಸವ ಸಂಪ್ರದಾಯ ಕೀರ್ತನೆಗಳೊಂದಿಗೆ ಉಂಛವೃತ್ತಿ ಜರುಗಲಿದೆ.

ನಂತರ ಶ್ರೀ ಕೋದಂಡರಾಮಚಂದ್ರ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿಗಾಯನ, ಸಂಗೀತ ಸೇವೆ ನಡೆಯಲಿದೆ.

ಇದೇ ವೇಳೆ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯರು ಮತ್ತು ಅವರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಗುವುದು ಎಂದು ಸಂಘದ ಕಾರ್ಯದರ್ಶಿ ಉಜ್ವಲ್ ಡಿ. ಪಡುಬಿದ್ರಿ ತಿಳಿಸಿದ್ದಾರೆ.