ಹುಡುಗರ ಲೈಂಗಿಕ ಸಾಮರ್ಥ್ಯ ಮ್ಯಾಗಿ ಥರ, ಎರಡೇ ನಿಮಿಷದಲ್ಲಿ ಮುಗಿದು ಹೋಗತ್ತೆ : ನಟಿ ರೆಜಿನಾ ಶಾಕಿಂಗ್ ಹೇಳಿಕೆ…

86
firstsuddi

ನಟಿ ರೆಜಿನಾ ಕಸೆಂದ್ರ ಹುಡುಗರ ಲೈಂಗಿಕ ಸಾಮರ್ಥ್ಯದ ಬಗ್ಗೆ ಜೋಕ್ ಮಾಡುವ ಮೂಲಕ ಟ್ರೋಲ್ ಆಗಿದ್ದಾರೆ. ರೆಜಿನಾ ಹಾಗೂ ನಿವೇದಾ ಥಾಮಸ್ ಅವರು ‘ಸಾಕಿನಿ ಧಾಕಿನಿ’ ಚಿತ್ರಕ್ಕಾಗಿ ಕೈ ಜೋಡಿಸಿದ್ದಾರೆ. ಸುಧೀರ್ ವರ್ಮಾ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದರು. ಸದ್ಯ ಇಬ್ಬರೂ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಇದ್ದಾರೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ರೆಜಿನಾ ಹುಡುಗರ ಲೈಂಗಿಕ ಸಾಮರ್ಥ್ಯವನ್ನು ಅಳೆದಿದ್ದಾರೆ.

‘ಹುಡುಗರ ಬಗ್ಗೆ ನನಗೆ ಒಂದು ಜೋಕ್ ಗೊತ್ತಿದೆ. ಆದರೆ, ಅದನ್ನು ಹೇಳಬೇಕೋ ಅಥವಾ ಬೇಡವೋ ಎಂಬುದು ತಿಳಿಯುತ್ತಿಲ್ಲ’ ಎಂದು ಕೆಲ ಕಾಲ ಯೋಚಿಸಿದರು. ನಂತರ ಹೇಳಿಯೇ ಬಿಟ್ಟರು. ‘ಹುಡುಗರ ಲೈಂಗಿಕ ಸಾಮರ್ಥ್ಯ ಮ್ಯಾಗಿ ಥರ, ಎರಡೇ ನಿಮಿಷದಲ್ಲಿ ಮುಗಿದು ಹೋಗುತ್ತದೆ. ಎಂದು ನಕ್ಕರು. ಈ ಮಾತನ್ನು ಕೇಳಿ ಅಲ್ಲಿದ್ದವರೂ ನಕ್ಕರು. ಸದ್ಯ ಈ ಜೋಕ್ ಗೆ ಕೆಲವರು ಟೀಕೆ ವ್ಯಕ್ತಪಡಿಸಿದ್ದಾರೆ. ‘ನಿಮಗೆ ಹೇಗೆ ಗೊತ್ತು’ ಎಂದು ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪ್ರಶ್ನೆ ಮಾಡಿದ್ದಾರೆ.

ರೆಜಿನಾ ಕನ್ನಡದ ‘ಸೂರ್ಯಕಾಂತಿ’ ಸಿನಿಮಾದಲ್ಲಿ ನಟಿಸಿದ್ದರು. ಚೇತನ್ ಕುಮಾರ್ ಈ ಚಿತ್ರಕ್ಕೆ ಹೀರೋ ಆಗಿದ್ದರು. ಕೆ.ಎಂ. ಚೈತನ್ಯ ನಿರ್ದೇಶನದಲ್ಲಿ ಮೂಡಿ ಬಂದ ಈ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು.