ಹುಬ್ಬಳ್ಳಿ : ಬೆಲ್ಟ್ ನಲ್ಲಿ ಚಿನ್ನದ ಬಿಸ್ಕೆಟ್ : ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು…

69
firstsuddi

ಹುಬ್ಬಳ್ಳಿ : ಪ್ಯಾಂಟ್ ಬೆಲ್ಟ್ ನಲ್ಲಿ ಚಿನ್ನದ ಬಿಸ್ಕೆಟ್ ಇಟ್ಟುಕೊಂಡು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕೇಶ್ವಾಪುರದ ಮಧುರಾ ಎಸ್ಟೇಟ್ ನಿವಾಸಿ ಚೇತನ ದೇವೆಂದ್ರಪ್ಪ ಜನ್ನು ಬಂಧಿತ ಆರೋಪಿ. ನಗರದ ಗಿರಣಿ ಚಾಳದ ಏಳು ಮಕ್ಕಳ ತಾಯಿ ದೇವಸ್ಥಾನದ ಬಳಿ ಆರೋಪಿಯನ್ನು ಬಂಧಿಸಲಾಗಿದೆ. ಈತ ಭಾನುವಾರ ರಾತ್ರಿ 38.50 ಲಕ್ಷ ಮೌಲ್ಯದ 804.1 ಗ್ರಾಂ ಚಿನ್ನವನ್ನು ಬೆಲ್ಟ್ ನಲ್ಲಿ ಸಾಗಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ತಪಾಸಣೆ ಮಾಡಿದಾಗ ಪ್ಯಾಂಟಿನ ಬೆಲ್ಟ್ ನಲ್ಲಿ ಚಿನ್ನದ ಬಿಸ್ಕೆಟ್ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.