ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ.

33

ಹುಬ್ಬಳ್ಳಿ: ನಗರದಲ್ಲಿ ಯುವಕನೋರ್ವನ ಬರ್ಬರ ಹತ್ಯೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಸುದೀಪ್, ಕಿರಣ್ ಕೊಲೆ ಆರೋಪಿಗಳು. ಅಶೋಕ ನಗರ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಶಿವರಾಜ್ ಕಮ್ಮಾರ ಎಂಬ ಯುವಕನನ್ನು ಕೊಲೆ ಮಾಡಿ ಪರಾರಿಯಾಗಿದ್ದರು. ಹತ್ಯೆ ನಡೆದ 6 ಗಂಟೆಯಲ್ಲಿ ಆರೋಪಿಗಳನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಕೂಡಲೇ ಆರೋಪಿಗಳಾದ ಸುದೀಪ್ ಮತ್ತು ಕಿರಣ್ ಕಾಲಿಗೆ ಫೈರಿಂಗ್ ಮಾಡಲಾಗಿದೆ. ಗುಂಡು ತಗುಲಿದ್ದರಿಂದ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.