ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ- ನಿಯಂತ್ರಣ ತಪ್ಪಿ ನೆಲಕ್ಕುರುಳಿದ 120 ಅಡಿ ಎತ್ತರದ ತೇರು…

29
firstsuddi

ಆನೇಕಲ್: ನಿಯಂತ್ರಣ ತಪ್ಪಿ ಸುಮಾರು 120 ಅಡಿ ಉದ್ದದ ತೇರು ನೆಲಕ್ಕುರುಳಿದ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಹೀಲಲಿಗೆ ಗ್ರಾಮದಲ್ಲಿ ನಡೆದಿದೆ.

ಇತಿಹಾಸ ಪ್ರಸಿದ್ಧ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ಅವಘಡ ಸಂಭವಿಸಿದೆ. ಹತ್ತಾರು ಗ್ರಾಮಗಳಿಂದ ಮದ್ದೂರಮ್ಮ ಜಾತ್ರೆಗೆ ಎತ್ತುಗಳು, ಟ್ರ್ಯಾಕ್ಟರ್​ಗಳ ಮೂಲಕ ತೇರು ಎಳೆದುಕೊಂಡು ಬರಲಾಗುತ್ತದೆ. ಹೀಲಲಿಗೆ ಗ್ರಾಮದಿಂದ ಹುಸ್ಕೂರಿಗೆ ತೇರು ಬರುತ್ತಿರುವಾಗ ಕಮ್ಮಸಂದ್ರದ ಹೈಪರ್ ಮಾರ್ಕೆಟ್ ತಿರುವಿನಲ್ಲಿ ಎಡಭಾಗಕ್ಕೆ ವಾಲಿಕೊಂಡು ನಿಧಾನವಾಗಿ ತೇರು ನೆಲಕ್ಕೆ ಅಪ್ಪಳಿಸಿದೆ. ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.