ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ ಇಂದು ನಡೆದಿದ್ದು, ಸತತ ಮೂರನೇ ಬಾರಿಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಬಿಜೆಪಿ ಪಾಲಾಗಿದೆ.
ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾನ್ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಮಾಡಲಾಗಿದೆ. ನೂತನ ಮೇಯರ್ ಆಗಿ ಈರೇಶ ಅಂಚಟಗೇರಿ ಹಾಗೂ ಉಪಮೇಯರ್ ಆಗಿ ಉಮಾ ಮುಕುಂದ್ ಆಯ್ಕೆಯಾಗಿದ್ದಾರೆ.










