ಹೃದಯಘಾತದಿಂದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ವಿಧಿವಶ…

77
firstsuddi

ಚಿಕ್ಕಬಳ್ಳಾಪುರ : ಬಾಗೇಪಲ್ಲಿ ಕ್ಷೇತ್ರದ ಮಾಜಿ ಶಾಸಕ ಜಿ.ವಿ ಶ್ರೀರಾಮರೆಡ್ಡಿ ಅವರು ಹೃದಯಘಾತದಿಂದ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಶ್ರೀರಾಮರೆಡ್ಡಿ ಸಿಪಿಐಎಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು. ಸಿಪಿಐಎಂ ಪಕ್ಷದಿಂದ ಉಚ್ಛಾಟಿತರಾದ ನಂತರ ಪ್ರಜಾ ಸಂಘರ್ಷ ಸಮಿತಿ ಪಕ್ಷ ಸ್ಥಾಪನೆ ಮಾಡಿದ್ದರು.

ರಾಜ್ಯದಲ್ಲಿರುವ ಹಲವು ಬಂಡಾಯ ಸಾಹಿತ್ಯ ಸಂಘಟನೆಗಳು, ದಲಿತ ಸಂಘಟನೆಗಳು, ರೈತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳನ್ನು ಕಟ್ಟುವಲ್ಲಿ ಶ್ರೀರಾಮರೆಡ್ಡಿಯವರು ಪ್ರಮುಖ ಪಾತ್ರ ವಹಿಸಿದ್ದರು. ಶ್ರೀರಾಮರೆಡ್ಡಿ ನಿಧನಕ್ಕೆ ಬೆಂಬಲಿಗರು ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.