ಹೃದಯಾಘಾತದಿಂದ ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್ ನಿಧನ…

72
firstsuddi

ಬೆಂಗಳೂರು : ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ನ ಉಪಾಧ್ಯಕ್ಷ ವಿಕ್ರಮ್ ಕಿರ್ಲೋಸ್ಕರ್(64) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಿರ್ಲೋಸ್ಕರ್ ಅವರಿಗೆ ನಿನ್ನೆ ರಾತ್ರಿ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೆಬ್ಬಾಳ ಚಿತಾಗಾರದಲ್ಲಿಂದು ಅಂತ್ಯಕ್ರಿಯೆ ನಡೆಯಲಿದೆ.

ವಿಕ್ರಮ್ ಅವರು ಕಿರ್ಲೋಸ್ಕರ್ ಸಿಸ್ಟಮ್ಸ್ ಲಿಮಿಟೆಡ್ ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು ಮತ್ತು ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈವೇಟ್ ನ ಉಪಾಧ್ಯಕ್ಷರೂ ಆಗಿದ್ದರು. ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಪದವೀಧರರಾದ ವಿಕ್ರಮ್ ಕಿರ್ಲೋಸ್ಕರ್ ಅವರು ಭಾರತೀಯ ಆಟೋ ವಲಯದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು.

ವಿಕ್ರಮ್ ಕಿರ್ಲೋಸ್ಕರ್ ಅವರ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಅಕಾಲಿಕ ನಿಧನದಿಂದ ದುಃಖವಾಗಿದೆ. ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡುವೆ ಎಂದು ಟ್ವೀಟ್ ಮಾಡಿದ್ದಾರೆ.