ಹೃದಯಾಘಾತದಿಂದ ನರ್ಸಿಂಗ್ ವಿದ್ಯಾರ್ಥಿನಿ ಸಾವು…

74
firstsuddi

ಮಂಗಳೂರು: ಹೃದಯಾಘಾತದಿಂದಾಗಿ ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಸುಮಾ(19) ಎಂದು ಗುರುತಿಸಲಾಗಿದೆ. ಮಂಗಳೂರಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಸುಮಾ ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆದು ಮನೆಯಲ್ಲಿದ್ದರು.

ಆಗಸ್ಟ್ 9 ರಂದು ಅನಾರೋಗ್ಯದ ಕಾರಣ ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಬಳಿಕ ಆ.11 ರಂದು ಮತ್ತೆ ಆರೋಗ್ಯ ಹಾಳಾಗಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಆದರೆ ಆ.13 ರಂದು ಸಂಜೆ ಮತ್ತೆ ಆಕೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಲೋ ಬಿಪಿಯಾಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ.