ಹೃದಯಾಘಾತದಿಂದ 6ನೇ ತರಗತಿ ಬಾಲಕ ಸಾವು…

64
firstsuddi

ಹುಬ್ಬಳ್ಳಿ : 6ನೇ ತರಗತಿ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕನಾಗಿದ್ದು, ಆತ ಕೆಲ ವರ್ಷಗಳಿಂದಲೇ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

ಎಂದಿನಂತೆ ಇಂದು ಬೆಳಗ್ಗೆ ಶಾಲೆಗೆ ಬಂದಿದ್ದ ಬಾಲಕ ಕ್ಲಾಸಿನಲ್ಲಿಯೇ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆತನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಆತ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.