ಹೆಚ್‌ಡಿಕೆ ಆರೋಗ್ಯದಲ್ಲಿ ಚೇತರಿಕೆ- ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ …

75
firstsuddi

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.

ಅನಾರೋಗ್ಯ ಹಿನ್ನೆಲೆ ಕುಮಾರಸ್ವಾಮಿ ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಜಯನಗರ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಮಾರಸ್ವಾಮಿ ಅವರಿಗೆ ಎಡಭಾಗದಲ್ಲಿ ರಕ್ತನಾಳ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವೈದ್ಯರು ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಿ ನಿಗಾ ವಹಿಸಿದ್ದಾರೆ.

ವಾರ್ಡ್‌ಗೆ ಶಿಫ್ಟ್ ಮಾಡುವ ಮೊದಲು ಹೆಚ್‌ಡಿಕೆ ಆರೋಗ್ಯ ಪರಿಸ್ಥಿತಿ ತಿಳಿಯುವ ಸಲುವಾಗಿ ಸಿಟಿ ಸ್ಕ್ಯಾನ್ ಮಾಡಿದ್ದು, ರಿಪೋರ್ಟ್‌ನಲ್ಲಿ ಆರೋಗ್ಯ ಸುಧಾರಿಸಿರುವುದು ಕಂಡುಬಂದಿದೆ. ಬಳಿಕ ಅವರನ್ನು ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ.