ತುಮಕೂರು : ಜಿಲ್ಲೆಯ ಕುಣಿಗಲ್ ತಾಲೂಕಿನ ತಿಪ್ಪೂರು ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದೆ.
ತಡರಾತ್ರಿ ಮಂಗಳೂರಿನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಅಪಘಾತ ನಡೆದಿದೆ. ವಾಹನದಲ್ಲಿದ್ದ ಐವರ ಪೈಕಿ ಮೂವರು ತೀವ್ರವಾಗಿ ಗಾಯಗೊಂಡಿದ್ದರೆ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮೃತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










