ಬೆಂಗಳೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 88ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಹುಟ್ಟುಹಬ್ಬಕ್ಕೆ ಟ್ವೀಟ್ ಮೂಲಕ ಸಿಎಂ ಬಿ.ಎಸ್.ಯಡಿಯೂರಪ್ಪನವರು ಶುಭ ಹಾರೈಸಿದ್ದು, ಅನೇಕ ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಶುಭ ಕೋರಿದ್ದಾರೆ.
ಹಿರಿಯರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಟ್ವೀಟ್ ಮಾಡಿದ್ದಾರೆ.
ಹಿರಿಯರು ಮತ್ತು ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ.@H_D_Devegowda pic.twitter.com/zeQU4abfIG
— B.S. Yediyurappa (@BSYBJP) May 18, 2021
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, “ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಹೆಚ್.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಆಯುಷ್ಯ, ಆರೋಗ್ಯ ನಿಮ್ಮದಾಗಲಿ. ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ಸಿಗಲಿ” ಎಂದು ಹಾರೈಸಿದ್ದಾರೆ.
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಪಕ್ಷದ ಹಿರಿಯ ನಾಯಕ ಎಚ್.ಡಿ.ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳು.
ಆಯುಷ್ಯ, ಆರೋಗ್ಯ ನಿಮ್ಮದಾಗಲಿ.
ರಾಜ್ಯ ಮತ್ತು ದೇಶಕ್ಕೆ ನಿಮ್ಮ ಅನುಭವದ ಮಾರ್ಗದರ್ಶನ ಸದಾ ಸಿಗಲಿ. pic.twitter.com/wMrjXfQfAM— Siddaramaiah (@siddaramaiah) May 18, 2021










