‘ಹೆಡ್ ಬುಷ್’ ನಲ್ಲಿ ವೀರಗಾಸೆಗೆ ಅವಮಾನ – ಡಾಲಿ ಧನಂಜಯ್ ಹೇಳಿದ್ದೇನು?

59
firstsuddi

ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಈಗಾಗಲೇ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ. ಡಾನ್ ಎಂ.ಪಿ. ಜಯರಾಜ್ ಪಾತ್ರದಲ್ಲಿ ಧನಂಜಯ್ ಕಾಣಿಸಿಕೊಂಡಿದ್ದಾರೆ. ಇದೀಗ ಈ ಸಿನಿಮಾದಲ್ಲಿ ವೀರಭದ್ರ ದೇವರ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ವೀರಗಾಸೆ ಕಲಾವಿದರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವೀರಗಾಸೆ ಹಾಕಿಕೊಂಡವರ ಮೇಲೆ ಡಾನ್ ಜಯರಾಜ್ ಹಲ್ಲೆ ಮಾಡಿದಂತೆ ತೋರಿಸಲಾಗಿದೆ, ಇದರಿಂದ ವೀರಗಾಸೆಗೆ ಅವಮಾನ ಆಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಧನಂಜಯ್ ಅವರು ಸ್ಪಷ್ಟನೆ ನೀಡಿದ್ದಾರೆ.

ನಾನು ಸ್ವತಃ ವೀರಭದ್ರಸ್ವಾಮಿಯ ಭಕ್ತನಾಗಿದ್ದು, ವೀರಗಾಸಗೆ ಅವಮಾನಿಸುವ ಯಾವ ಅಂಶವು ಇಲ್ಲದಂತೆ ನೋಡಿಕೆೊಂಡಿದ್ದೇನೆ. ದೂಷಿಸುವವರು ದಯವಿಟ್ಟು ಸಿನಿಮಾ ನೋಡಿ ಕೂಲಂಕುಷವಾಗಿ ವಿಮರ್ಶಿಸಬೇಕಾಗಿ ಕೇಳಿಕೊಳ್ಳುತ್ತೇನೆ. ಅದರ ಕುರಿತಾಗಿ ನನ್ನ ವಿವರಣೆ ಈ ಕೆಳಗಿನ ಲಿಂಕಿನಲ್ಲಿದೆ ಎಂದು ಡಾಲಿ ಟ್ವೀಟ್ ಮಾಡಿದ್ದಾರೆ.