ಬೋಪಾಲ್ : ಆಂಬುಲೆನ್ಸ್ ಬಾರದೆ ಗರ್ಭಿಣಿ ಮಹಿಳೆಯೊಬ್ಬರು ಹೆದ್ದಾರಿಯಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯ ಪ್ರದೇಶದ ಬುರ್ಹಾನ್‍ಪುರದಲ್ಲಿ ನಡೆದಿದೆ. ಕಮಲ ಬಾಯಿ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಈ ವೇಳೆ ಕುಟುಂಬಸ್ಥರು ಆಸ್ಪತ್ರೆಗೆ ಕರೆ ಮಾಡಿ ಆಂಬುಲೆನ್ಸ್ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ಆದರೆ ಸುಮಾರು 1 ಗಂಟೆ ಕಳೆದರೂ ಆಂಬುಲೆನ್ಸ್ ಬರದೆ ಇದ್ದ ಕಾರಣ ಕಮಲ ಬಾಯಿ ಅವರ ಪತಿ ತಮ್ಮ ಬೈಕ್‍ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಹೆದ್ದಾರಿಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮಗುವನ್ನು ಶಹಪುರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದ್ದು, ತಪಾಸಣೆ ಮಾಡಿದ ವೈಧ್ಯರು ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.










