ಬೆಂಗಳೂರು : ನಿನ್ನೆ ಹೈಕಮಾಂಡ್ ನಿಂದ ಬುಲಾವ್ ಬಂದ ಕಾರಣ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಇಂದು ದೆಹಲಿಗೆ ದೌಡಾಯಿಸಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾತ್ರಿ ದೆಹಲಿಯಿಂದ ಹೊರಟು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಅವರು ಬೇರೆ ಬೇರೆ ವಿಮಾನಗಳಲ್ಲಿ ತೆರಳಿದ್ದು ವಿಶೇಷ.
ವಿಮಾನ ನಿಲ್ದಾಣಕ್ಕೆ ಹೊರಡುವ ಮೊದಲು ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಪಕ್ಷದ ಅಧ್ಯಕ್ಷರು ಕರೆದಿದ್ದಾರೆ, ಹೋಗುತ್ತಿದ್ದೇವೆ, ಯಾಕೆ ಅಂತ ಗೊತ್ತಿಲ್ಲ, ಎಂದಷ್ಟೇ ಹೇಳಿದರು.










